ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರೂರು ಕಾಲ್ತುಳಿತ ದುರಂತದ ಬಳಿಕ ಮೊದಲ ಬಾರಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ತಮಿಳುನಾಡು ಮುಖ್ಯಮಂತ್ರಿ ವಿಜಯ್, ಘಟನೆಯನ್ನು ನೆನೆದು ಭಾವುಕರಾದರು. ದುರಂತದ ಹೊಣೆಗಾರಿಕೆ ಬಗ್ಗೆ ಸತ್ಯ ಹೊರಬರಬೇಕು ಎಂದು ಆಗ್ರಹಿಸಿದ ಅವರು, ಪೊಲೀಸರ ನಡೆ ಮತ್ತು ತಮ್ಮ ವಿರುದ್ಧದ ಆರೋಪಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಪೊಲೀಸರ ವಿರುದ್ಧ ಅಸಮಾಧಾನ
ಸಭೆಯ ಭದ್ರತಾ ಹೊಣೆ ಪೊಲೀಸರದ್ದಾಗಿದ್ದರೂ, ಬಳಿಕ ತಮ್ಮ ಮೇಲೆಯೇ ಆರೋಪ ಹೊರಿಸಲಾಯಿತು ಎಂದು ವಿಜಯ್ ಹೇಳಿದರು. ಪರಿಸ್ಥಿತಿಯನ್ನು ನಿಯಂತ್ರಿಸುವ ಅವಕಾಶ ಇದ್ದರೂ ಅಗತ್ಯ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಟೀಕಿಸಿದರು.
ಇದನ್ನೂ ಓದಿ:
ಕರೂರು ಘಟನೆ ತಮ್ಮ ಜೀವನದ ಅತ್ಯಂತ ನೋವಿನ ಕ್ಷಣಗಳಲ್ಲಿ ಒಂದಾಗಿದೆ ಎಂದು ಹೇಳಿದ ವಿಜಯ್, ದುರಂತದ ಬಳಿಕ ತಮ್ಮ ವಿರುದ್ಧ ರಾಜಕೀಯ ಪ್ರೇರಿತ ಆರೋಪಗಳು ನಡೆದವು ಎಂದು ಬೇಸರ ವ್ಯಕ್ತಪಡಿಸಿದರು. ಜೊತೆಗೆ ತಮಿಳುನಾಡಿನಲ್ಲಿ ಕ್ಷೇತ್ರ ಮರುವಿಂಗಡಣೆ (ಡಿಲಿಮಿಟೇಷನ್) ಜಾರಿಗೆ ಅವಕಾಶ ನೀಡುವುದಿಲ್ಲ ಎಂದೂ ಸ್ಪಷ್ಟಪಡಿಸಿದರು.
ಸಂತ್ರಸ್ತ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ
ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೀಡಿದ್ದ ಭರವಸೆಯಂತೆ 32 ಕುಟುಂಬಗಳಿಗೆ ಸರ್ಕಾರಿ ಉದ್ಯೋಗದ ನೇಮಕಾತಿ ಆದೇಶಗಳನ್ನು ವಿಜಯ್ ವಿತರಿಸಿದರು. ಈ ಕ್ರಮಕ್ಕೆ ನ್ಯಾಯಾಲಯವೂ ಷರತ್ತುಬದ್ಧ ಅನುಮತಿ ನೀಡಿದ್ದು, ಪ್ರಕರಣದ ಅಂತಿಮ ತೀರ್ಪಿಗೆ ಒಳಪಟ್ಟು ನೇಮಕಾತಿಗಳು ಮುಂದುವರಿಯಲಿವೆ.



