Friday, February 3, 2023

Latest Posts

ರಾಜ್ಯ ಸರ್ಕಾರದಿಂದ ಯುವ ಜನತೆಗೆ ಉದ್ಯೋಗ ನೀಡುವ ಕೆಲಸ: ಸಿಎಂ ಬೊಮ್ಮಾಯಿ

ಹೊಸದಿಗಂತ ವರದಿ, ಹಾವೇರಿ:

ರಾಜ್ಯದ ೫ ಲಕ್ಷ ಮಹಿಳೆಯರು ಮತ್ತು ೫ ಲಕ್ಷ ಯುವ ಜನತೆಗೆ ಉದ್ಯೋಗ ನೀಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಜಿಲ್ಲೆಯ ಶಿಗ್ಗಾವ ತಾಲೂಕಿನ ಬಾಡ ಗ್ರಾಮದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಶಿಗ್ಗಾವ ತಾಲೂಕಿನ ಬಾಡ ಗ್ರಾಮದಲ್ಲಿ ಆಯೋಜಿಸಿರುವ ಕಂದಾಯ ಸಚಿವ ಆರ್.ಅಶೋಕ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಾಗೂ ಸರ್ಕಾರದ ವಿವಿಧ ಸೌಲಭ್ಯತ್ತುಗಳ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇದಲ್ಲದೆ ವಿವಿದ ದುಡಿಯುವ ವರ್ಗದ ಕೈಗಳಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡುವದಕ್ಕಾಗಿ ಅಂತಹ ಜನತೆಗೆ ೫೦ ಸಾವಿರ ರೂಗಳನ್ನು ನೀಡುತ್ತಿದ್ದೇವೆ. ತಳ ಹಂತದ ಜನತೆ ದುಡಿಯದಿದ್ದರೆ ದೇಶದ ಪ್ರಗತಿ ಸಾಧ್ಯವಿಲ್ಲ ಎಂದರು.

ರಾಜ್ಯ ಸರ್ಕಾರ ನೀರಾವರಿ ಯೋಜನೆಗೆ ಅತಿ ಹೆಚ್ಚು ಅನುದಾನವನ್ನು ನೀಡುತ್ತಿದೆ. ರಾಜ್ಯದಲ್ಲಿ ಮೂರು ಸಾವಿರ ರಾಜ್ಯ ಹೆದ್ದಾರಿ ಮತ್ತು ಸೇತುವೆಗಳ ನಿರ್ಮಾಣ ಮಾಡಲಾಗುತ್ತಿದೆ. ರೈಲ್ವೆ ನಿರ್ಮಾಣ ಮಾಡುವುದಕ್ಕೆ ಹೆಚ್ಚಿನ ಅನುದಾನವನ್ನು ನೀಡುತಗತಿದೆ. ಶಿಕ್ಷಣ ಬಹಳ ಮಹತ್ವ ಅದಕ್ಕಾಗಿ ರಾಜ್ಯದಲ್ಲಿ ೮ ಸಾವಿರ ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಬರುವ ದಿನಗಳಲ್ಲಿ ಪ್ರತಿ ಜಿಲ್ಲೆ ಮತ್ತು ತಾಲೂಕಾ ಕೇಂದ್ರಗಳಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆಗಬೇಕೆಂಬ ಆಸೆ ನನ್ನದಾಗಿದೆ. ಇದರಿಂದ ಬಡ ಜನತೆಗೆ ಹೆಚ್ಚಿನ ಲಾಭವಾಗಲಿದೆ ಎಂದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಕಂದಾಯ ಸಚಿವ ಆರ್.ಅಶೋಕ ಮಾತನಾಡಿದರು. ವೇದಿಕೆಯಲ್ಲಿ ಕೇಂದ್ರ ಸಚಿದ ಪ್ರಹ್ಲಾದ ಜೋಶಿ, ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರಬೈಲ್ ಶಿವರಾಮ ಹೆಬ್ಬಾರ್, ಶಾಸಕರಾದ ವಿರುಪಾಕ್ಷಪ್ಪ ಬಳ್ಳಾರಿ, ಅರುಣಕುಮಾರ ಗುತ್ತೂರ, ಮಾಜಿ ಶಾಸಕ ಶಿವರಾಜ ಸಜ್ಜನರ, ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಜಿ.ಪಂ ಸಿಇಓ ಮಹ್ಮದ ರೋಷನ್ ಇತರರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!