ಸ್ವಿಗ್ಗಿ-ಝೊಮ್ಯಾಟೊದಲ್ಲಿ ಕನ್ನಡ ಬಳಕೆಗೆ ಕಾನೂನು ಜಾರಿಗೆ ತನ್ನಿ: ಸರ್ಕಾರಕ್ಕೆ ಕೆಡಿಎ ಆಗ್ರಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ಸ್ವಿಗ್ಗಿ, ಜೊಮ್ಯಾಟೋ ಮುಂತಾದ ಆಹಾರ ಡೆಲಿವರಿ ಸಂಸ್ಥೆಗಳು ತಮ್ಮ ಸೇವೆಗಳಲ್ಲಿ ಕನ್ನಡ ಬಳಕೆಗೆ ಕಾನೂನು ಜಾರಿಗೆ ತರಬೇಕೆಂದು ರಾಜ್ಯ ಸರ್ಕಾರಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಗ್ರಹಿಸಿದೆ.

ಈ ಸಂಬಂಧ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಸಚಿವ ಸಂತೋಷ್ ಲಾಡ್ ಅವರಿಗೆ ಪತ್ರ ಬರೆದಿದ್ದಾರೆ.

ಮನೆ ಮನೆಗೆ ಆಹಾರ ತಲುಪಿಸುವ ಸೇವೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಪ್ರವರ್ಧಮಾನಕ್ಕೆ ಬಂದಿರುವ ಸ್ವಿಗ್ಗಿ, ಝೊಮ್ಯಾಟೊನಂತಹ ಸಂಸ್ಥೆಗಳ ಕನ್ನಡ ವಿರೋಧಿ ಧೋರಣೆಯನ್ನು ನಿಯಂತ್ರಿಸಬೇಕಾದಲ್ಲಿ ರಾಜ್ಯ ಸರಕಾರವು ಉದ್ದೇಶಿಸಿರುವ ಕಾರ್ಮಿಕ ಭದ್ರತಾ ಕಾಯ್ದೆಯಲ್ಲಿ ಸೂಕ್ತ ತಿದ್ದುಪಡಿ ತರಬೇಕಾದ ತುರ್ತು ಅವಶ್ಯಕತೆ ಇದೆ ಎಂದು ಬರೆದಿದೆ.

ಆಧುನಿಕ ಸೇವಾ ವಲಯದಲ್ಲಿ ಕನ್ನಡ ಅವಗಣನೆಗೆ ಒಳಪಟ್ಟಿದೆ. ಈ ವಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಸಂಘಟಿತ ಕಾರ್ಮಿಕರಿಗೆ ಸೇವಾ ಭದ್ರತೆಯನ್ನು ಒದಗಿಸುವ ಸರ್ಕಾರದ ನಿರ್ಧಾರದಲ್ಲಿ ಇಂತಹ ಸಂಸ್ಥೆಗಳ ಸೇವೆಗಳು ಕನ್ನಡ ಪರವಾಗಿ ಇರಬೇಕಾದುದು ಮುಖ್ಯವಾಗಿದೆ. ಇದಕ್ಕಾಗಿ ಸರಕಾರವು ಉದ್ದೇಶಿಸಿರುವ ಸೇವಾ ಭದ್ರತಾ ಕಾಯ್ದೆಯಲ್ಲಿ ಸೂಕ್ತ ಅವಕಾಶವನ್ನು ಕಲ್ಪಿಸಿಕೊಳ್ಳಬೇಕಾಗಿರುತ್ತದೆ ಎಂದು ಹೇಳಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!