ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಜಮ್ಮು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭದ್ರತಾ ಪಡೆ ಎನ್ ಕೌಂಟರ್ ನಡೆಸಿದ್ದು, ಒಬ್ಬ ಉಗ್ರನನ್ನು ಹೊಡೆದುರುಳಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ಕುಲ್ಗಾಂ ಜಿಲ್ಲೆಯ ಮುನಾಂದ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆ, ಶೋಧ ಕಾರ್ಯ ನಡೆಸಿ ಓರ್ವ ಉಗ್ರನನ್ನು ಎನ್ ಕೌಂಟರ್ ಮಾಡಿದೆ ಎಂದು ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆಯಷ್ಟೆ ಜಮ್ಮುನಿನ ಗಡಿ ಸಮೀಪ ಹಾರಾಟ ನಡೆಸುತ್ತಿದ್ದ ಡ್ರೋನ್ ಗಳನ್ನು ಪೊಲೀಸರು ಹೊಡೆದುರುಳಿಸಿದ್ದು, ಶನಿವಾರವೂ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.