ಕಾಶ್ಮೀರದ ಕುಲ್ಗಾಮ್​ ನಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಟ್ರುಬ್ಜಿ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಯೋಧರು ಹೊಡೆದುರುಳಿಸಿದ್ದಾರೆ.
ಕುಲ್ಗಾಮ್‌ನ ಟ್ರುಬ್ಜಿ ಪ್ರದೇಶದ ನೌಪೋರಾ-ಖೇರ್ಪೋರಾದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಮೇರೆಗೆ ಸೇನಾಪಡೆಗಳು ಕಾರ್ಯಾಚರಣೆಗೆ ನಡೆಸಲಾಗಿದ್ದು, ಈ ವೇಳೆ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಹತ್ಯೆಗೀಡಾದ ಉಗ್ರರ ಗುರುತು ಮತ್ತು ಗುಂಪು ಸಂಬಂಧವನ್ನು ಇನ್ನೂ ಖಚಿತಪಡಿಸಲಾಗಿಲ್ಲ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!