ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಭಾನುವಾರ ಮುಂಜಾನೆ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಓರ್ವ ಭಯೋತ್ಪಾದಕನನ್ನು ಭದ್ರತಾ ಪಡೆ ಹೊಡೆದುರುಳಿಸಿದೆ ಎಂದು ಜಮ್ಮು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆ, ಕಾರ್ಯಾಚರಣೆ ಪ್ರಾರಂಭಿಸಿತ್ತು. ಈ ವೇಳೆ ಓರ್ವ ಭಯೋತ್ಪಾದಕನನ್ನು ಸದೆಬಿಡಿಯಲಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ಬುಧವಾರವಷ್ಟೆ ಶೋಪೊಯನ್ ನಲ್ಲಿ ಭದ್ರತಾ ಪಡೆಗಳು ಲಷ್ಕರ್ ಎ ತೋಯ್ಬಾದ ಮೂವರು ಭಯೋತ್ಪಾದಕರನ್ನು ಹೊಡೆದುರಿಳಿಸಿತ್ತು.