ಹೊಸದಿಗಂತ ಆನ್ಲೈನ್ ಡೆಸ್ಕ್:
ಜಮ್ಮು ಕಾಶ್ಮೀರದ ಬಂಡಿಪೊರದಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕನನ್ನು ಹೊಡೆದುರುಳಿಸಿದ್ದಾರೆ.
ಹತ್ಯೆಯಾದ ಉಗ್ರನನ್ನು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಎಲ್ಇಟಿಗೆ ಸೇರಿದ ಇಮ್ತಿಯಾಜ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದೆ.
ಎನ್ಕೌಂಟರ್ ವೇಳೆ ಪೊಲೀಸರೊಬ್ಬರಿಗೆ ಗಾಯವಾಗಿದೆ. ಶೋಧಕಾರ್ಯ ಮುಂದುವರಿದಿದೆ ಎಂದು ಜಮ್ಮು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಮೃತ ಭಯೋತ್ಪಾದಕ ಇತ್ತೀಚೆಗೆ ಬಂಡಿಪೊರಾದ ಶಹ್ಗುಂಡ್ ಪ್ರದೇಶದಲ್ಲಿ ನಾಗರಿಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.