Saturday, September 20, 2025

ಸೇನೆ – ಭಯೋತ್ಪಾದಕರ ಮಧ್ಯೆ ಎನ್​ಕೌಂಟರ್: ಯೋಧ ಹುತಾತ್ಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಜಮ್ಮು ಮತ್ತು ಕಾಶ್ಮೀರದ ಉಧಂಪುರ ಮತ್ತು ದೋಡಾ ಜಿಲ್ಲೆಗಳ ಗಡಿಯಲ್ಲಿ ಶುಕ್ರವಾರ ರಾತ್ರಿಯಿಂದ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಪ್ತಚರ ಇಲಾಖೆಯ ಖಚಿತ ಮಾಹಿತಿ ಆಧಾರದಲ್ಲಿ ಭಾರತೀಯ ಸೇನೆ, ವಿಶೇಷ ಕಾರ್ಯಾಚರಣೆ ತಂಡ ಹಾಗೂ ಪೊಲೀಸರು ಸಿಯೋಜ್​ ಧಾರ್​ ಎತ್ತರದ ಪ್ರದೇಶದ ಗಡಿಯಲ್ಲಿರುವ ದುಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ವೇಳೆ ಗುಂಡಿನ ಚಕಮಕಿ ನಡೆದಿದ್ದು, ಸೈನಿಕರೊಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ