ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಎನ್ ಕೌಂಟರ್ ನಲ್ಲಿ ಆರು ನಕ್ಸಲೀಯರು ಸಾವನ್ನಪ್ಪಿದ್ದಾರೆ.
ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಹಿರಿಯ ನಕ್ಸಲೀಯರು ಇರುವ ಬಗ್ಗೆ ದೊರೆತ ಮಾಹಿತಿ ಆಧಾರದ ಮೇಲೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದಾಗ ಗುಂಡಿನ ಚಕಮಕಿ ನಡೆಯಿತು ಎಂದು ಬಿಜಾಪುರ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಯಾದವ್ ತಿಳಿಸಿದ್ದಾರೆ.
ಎನ್ ಕೌಂಟರ್ ನಡೆದ ಸ್ಥಳದಿಂದ INSAS ರೈಫಲ್, ಸ್ಟೆನ್ ಗನ್, 303 ರೈಫಲ್ ಮತ್ತು ಸ್ಫೋಟಕಗಳು ಸೇರಿದಂತೆ ಆರು ನಕ್ಸಲೀಯರ ಮೃತದೇಹಗಳು ಪತ್ತೆಯಾಗಿವೆ. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

