ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಭಧ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಕಾಳಗ ನಡೆಯುತ್ತಿದೆ. ಭಾರತೀಯ ಸೇನೆ, ಮತ್ತು ಕಾಶ್ಮೀರ ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಗಳ ಜಂಟಿ ಕಾರ್ಯಾಚರಣೆ ರಜೌರಿಯ ಕಲಾಕೋಟೆ ಪ್ರದೇಶದಲ್ಲಿ ಮಂಗಳವಾರವೂ ಮುಂದುವರೆಯಿತು.
ಕಲಕೋಟೆಯ ಅರಣ್ಯ ಪ್ರದೇಶದಲ್ಲಿ ಸೋಮವಾರ ಸಂಜೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿತ್ತು. ಅಕ್ಟೋಬರ್ 1 ರಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ದೊರೆತ ಕೆಲವು ಅಪರಿಚಿತ ವ್ಯಕ್ತಿಗಳ ಚಲನವಲನನ್ನು ಆಧರಿಸಿ ಕಾರ್ಯಾಚರಣೆ ಪ್ರಾರಂಭವಾಯಿತು.
ಭಯೋತ್ಪಾದಕರನ್ನು ತಟಸ್ಥಗೊಳಿಸಲು ಈ ಪ್ರದೇಶದಲ್ಲಿ ಕಾರ್ಯಾಚರಣೆಗಳು ತೀವ್ರ ಪ್ರಗತಿಯಲ್ಲಿವೆ.