ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಭದ್ರತಾ ಪಡೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಸದೆಬಡೆದಿದ್ದಾರೆ.
ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಪಡೆದ ಭದ್ರಾಪಡೆ ಇಂದು ಮುಂಜಾನೆ ಕಾರ್ಯಾಚರಣೆ ಆರಂಭಿಸಿದೆ. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಸೂಕ್ತ ಉತ್ತರ ನೀಡಿದ ಸೇನೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.
ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.