ಬಾರಾಮುಲ್ಲಾದಲ್ಲಿ ಭಯೋತ್ಪಾದಕರು-ಭದ್ರತಾ ಪಡೆಗಳ ನಡುವೆ ಗುಂಡಿನ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಜಮ್ಮು ಮತ್ತು ಕಾಶ್ಮೀರ ಬಾರಾಮುಲ್ಲಾದ ಯಡಿಪೋರಾ, ಪಟ್ಟನ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆಯುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಇದಕ್ಕೂ ಮೊದಲು, ಶುಕ್ರವಾರ ಮುಂಜಾನೆಯೇ ಶೋಪಿಯಾನ್ ಜಿಲ್ಲೆಯ ಚಿತ್ತಗಾಮ್ ಪ್ರದೇಶದಲ್ಲೂ ಕೂಡಾ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಮತ್ತೊಂದು ಎನ್‌ಕೌಂಟರ್ ನಡೆದಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಮಂಗಳವಾರ ಮುಂಜಾನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜೊತೆಗೆ ಭಾರತೀಯ ಸೇನೆಯು ನಡೆಸಿದ ಕಾರ್ಯಾಚರಣೆಯಲ್ಲಿ ಕುಲ್ಗಾಮ್ ಜಿಲ್ಲೆಯ ಅವ್ಹೋಟು ಗ್ರಾಮದಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎನ್‌ಕೌಂಟರ್ ಸ್ಥಳದ ಹುಡುಕಾಟದಲ್ಲಿ, ಎರಡು ಎಕೆ ಸರಣಿ ರೈಫಲ್‌ಗಳು, ಗ್ರೆನೇಡ್‌ಗಳು ಮತ್ತು ಇತರ ಯುದ್ಧೋಚಿತ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತ್ಯೆಯಾದ ಭಯೋತ್ಪಾದಕರನ್ನು ಕುಲ್ಗಾಮ್‌ನ ಟಾಕಿಯಾದ ಮೊಹಮ್ಮದ್ ಶಫಿ ಗನಿ ಮತ್ತು ಮೊಹಮ್ಮದ್ ಆಸಿಫ್ ವಾನಿ ಎಂದು ಪೊಲೀಸರು ಗುರುತಿಸಿದ್ದಾರೆ. ಇಬ್ಬರೂ ಭಯೋತ್ಪಾದಕರು ಜೈಶ್-ಎ-ಮೊಹಮ್ಮದ್ ಸಂಘಟನೆಯ ಸದಸ್ಯರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!