ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಯಿಂದ ಎನ್‌ಕೌಂಟರ್‌: 12 ನಕ್ಸಲರ ಹತ್ಯೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 12 ನಕ್ಸಲರನ್ನು ಹತ್ಯೆ ಮಾಡಲಾಗಿದೆ.

ಬಿಜಾಪುರ ಮತ್ತು ತೆಲಂಗಾಣದ ಗಡಿಯಲ್ಲಿರುವ ಮೂರು ಜಿಲ್ಲೆಗಳ ನಕ್ಸಲರ ವಿರುದ್ಧ ಸೈನಿಕರು ಪ್ರಮುಖ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ಛತ್ತೀಸ್​ಗಢದ ಬಿಜಾಪುರದ ಕಾಡಿನಲ್ಲಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆಯಿತು ಎಂದು ಅವರು ಹೇಳಿದ್ದಾರೆ.

ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನೂ ಎನ್​ಕೌಂಟರ್ ಕಾರ್ಯಾಚರಣೆ ಮುಂದುವರೆದಿದೆ. ಎನ್​ಕೌಂಟರ್ ಸ್ಥಳದಿಂದ 1 ಎಸ್ಎಲ್ಆರ್ ಮತ್ತು ಇತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!