ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಏಳು ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಟುರ್ನಗರಂ ಅರಣ್ಯ ಪ್ರದೇಶದಲ್ಲಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಏಳು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ಎಸ್ಪಿ ಶಬರೀಶ್ ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.