ಛತ್ತೀಸ್ ಗಢದ ಬಸ್ತಾರ್‌ನಲ್ಲಿ ಎನ್‌ಕೌಂಟರ್; ಇಬ್ಬರು ಕಟ್ಟಾ ನಕ್ಸಲರ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಎನ್‌ಕೌಂಟರ್‌ ನಡೆದಿದ್ದು, ಭದ್ರತಾ ಪಡೆಗಳು ಇಬ್ಬರು ನಕ್ಸಲರನ್ನು ಹತ್ಯೆ ಮಾಡಿದ್ದಾರೆ.

ಸಿಕ್ಕಿಬಿದ್ದರೆ 13 ಲಕ್ಷ ರೂಪಾಯಿ ಸಾಮೂಹಿಕ ಬಹುಮಾನ ಘೋಷಣೆಯಾಗಿದ್ದ ಇಬ್ಬರು ಕಟ್ಟಾ ನಕ್ಸಲರನ್ನು ಭದ್ರತಾ ಪಡೆಗಳು ಇಂದು ನಸುಕಿನ ಜಾವ ಎನ್‌ಕೌಂಟರ್‌ನಲ್ಲಿ ಹತ್ಯೆಗೈದಿದ್ದಾರೆ.

ನಿನ್ನೆ ಸಂಜೆ ಕೊಂಡಗಾಂವ್ ಮತ್ತು ನಾರಾಯಣಪುರ ಜಿಲ್ಲೆಗಳ ಗಡಿಯಲ್ಲಿರುವ ಕಿಲಾಮ್-ಬರ್ಗಮ್ ಗ್ರಾಮಗಳ ಕಾಡಿನಲ್ಲಿ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲೈಟ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಬಸ್ತಾರ್ ವಲಯದ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಸುಂದರರಾಜ್ ಪಿ ತಿಳಿಸಿದ್ದಾರೆ.

ಕೊಂಡಗಾಂವ್‌ನಿಂದ ರಾಜ್ಯ ಪೊಲೀಸರ ಎರಡೂ ಘಟಕಗಳಾದ ಜಿಲ್ಲಾ ಮೀಸಲು ಪಡೆ ಮತ್ತು ಬಸ್ತಾರ್ ಫೈಟರ್ಸ್‌ಗೆ ಸೇರಿದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು ಎಂದು ಹೇಳಿದರು.

ಇಲ್ಲಿಯವರೆಗೆ, ಇಬ್ಬರು ನಕ್ಸಲರ ಮೃತದೇಹಗಳು, ಒಂದು ಎಕೆ-47 ರೈಫಲ್ ಮತ್ತು ಇತರ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು, ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!