ಹೊಸದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯ ಅಬುಜ್‌ಮದ್‌ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 14 ನಕ್ಸಲರು ಹತ್ಯೆಗೀಡಾಗಿದ್ದಾರೆ.
ದಾಂತೇವಾಡ ಮತ್ತು ನಾರಾಯಣಪುರದ ಜಿಲ್ಲಾ ಮೀಸಲು ಗಾರ್ಡ್‌ಗಳು (ಡಿಆರ್‌ಜಿ), ಅಬುಜ್‌ಮದ್‌ನಲ್ಲಿ ನಕ್ಸಲರು ಇರುವುದರ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ.
ಅಬುಜ್‌ಮದ್‌ನ ದಕ್ಷಿಣ ಭಾಗದಲ್ಲಿರುವ ತುಲ್ತುಲಿ ಗ್ರಾಮದಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಗೌರವ್ ರೈ ಹೇಳಿದ್ದಾರೆ.
ಎನ್‌ಕೌಂಟರ್ ನಡೆದ ಸ್ಥಳದಿಂದ ಎಕೆ 47 ರೈಫಲ್ ಮತ್ತು ಸ್ವಯಂ-ಲೋಡಿಂಗ್ ರೈಫಲ್ (ಎಸ್‌ಎಲ್‌ಆರ್) ನಂತಹ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ಶೋಧ ಕಾರ್ಯಾಚರಣೆಗಳು ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.