ಹೊಸದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್‌ಗಢ ಹಾಗೂ ತೆಲಂಗಾಣ ಗಡಿಯಲ್ಲಿರುವ ಬಿಜಾಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 15ಕ್ಕೂ ಹೆಚ್ಚು ಮಾವೋವಾದಿಗಳು ಹತ್ಯೆಗೀಡಾಗಿದ್ದಾರೆ.
ಅಂತರರಾಜ್ಯ ಗಡಿಯಲ್ಲಿರುವ ಕರ್ರೆಗುಟ್ಟ ಬೆಟ್ಟದ ಅರಣ್ಯದಲ್ಲಿ ಇಂದು ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ. ಇಲ್ಲಿಯವರೆಗೆ 15ಕ್ಕೂ ಹೆಚ್ಚು ಮಾವೋವಾದಿಗಳು ಸಾವಿಗೀಡಾಗಿದ್ದಾರೆ. ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏ.21 ರಂದು ನಕ್ಸಲರು ಬಸ್ತಾರ್‌ನ ಅರಣ್ಯ ಪ್ರದೇಶದಲ್ಲಿ ಅಡಗಿರುವ ಮಾಹಿತಿ ಮೇರೆಗೆ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು.