ಛತ್ತೀಸ್​ಗಢದಲ್ಲಿ ಎನ್​ಕೌಂಟರ್​: ಮೂವರು ನಕ್ಸಲರ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಛತ್ತೀಸ್​ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಎನ್​ಕೌಂಟರ್​ನಲ್ಲಿ ಇಬ್ಬರು ಪುರುಷರು ಮತ್ತು ಒಬ್ಬ ಮಹಿಳೆ ಸೇರಿದಂತೆ ಮೂವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ನಾರಾಯಣಪುರ ಪೊಲೀಸರು ಹೇಳಿದ್ದಾರೆ.

ಛತ್ತೀಸ್‌ಗಢ-ಮಹಾರಾಷ್ಟ್ರ ಗಡಿಯ ಅಭುಜ್​ಮಾದ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಾರ್ಯಚರಣೆ ನಡೆಸುವಾಗ ಸೋಮವಾರ ಸಂಜೆ ಸುಮಾರು 4 ಗಂಟೆಗೆ ಗುಂಡಿನ ಚಕಮಕಿ ನಡೆದಿದ್ದು , ಈ ಕಾರ್ಯಚರಣೆಯಲ್ಲಿ ಮೂವರು ನಕ್ಸಲರನ್ನು ಮೃತಪಟ್ಟಿದ್ದಾರೆ.

ಘಟನಾ ಸ್ಥಳದಿಂದ ಎಕೆ-47 ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ಎನ್​ಕೌಂಟರ್​ನಲ್ಲಿ ಭದ್ರತಾ ಪಡೆ ಪ್ರಭಾವಿ ಕಮಾಂಡರ್ ಶಂಕರ್ ರಾವ್​ರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದೆ. ಅವರನ್ನು ಹಿಡಿದುಕೊಟ್ಟವರಿಗೆ 25 ಲಕ್ಷ ರೂ. ಬಹುಮಾನ ನೀಡುವುದಾಗಿ ಈ ಮೊದಲು ಘೋಷಿಸಲಾಗಿತ್ತು.

ಛತ್ತೀಸ್​ಗಢದ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಎನ್​ಕೌಂಟರ್​ನ್ನು ನಕ್ಸಲೀಯರ ಮೇಲಿನ ಸರ್ಜಿಕಲ್ ಸ್ಟ್ರೈಕ್ ಎಂದು ಕರೆದಿದ್ದಾರೆ. ಇದರ ಸಂಪೂರ್ಣ ಶ್ರೇಯ ಭದ್ರತಾ ಪಡೆಗೆ ಸಲ್ಲುತ್ತದೆ ಎಂದರು.

- Advertisement - Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!