ಹೊಸದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್ ಗಢದಲ್ಲಿ ಭದ್ರತಾಪಡೆ ಸಿಬ್ಬಂದಿಗಳು ಮೂವರು ಮಹಿಳಾ ನಕ್ಸಲರನ್ನು ಎನ್ ಕೌಂಟರ್ ಮಾಡಿದ್ದಾರೆ.
ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವಿನ ಎನ್‌ಕೌಂಟರ್‌ನಲ್ಲಿ ಮೂವರು ಮಹಿಳಾ ನಕ್ಸಲರು ಹತರಾಗಿದ್ದಾರೆ.
ನಾರಾಯಣಪುರ ಮತ್ತು ಕಾಂಕೇರ್ ಜಿಲ್ಲೆಗಳ ನಡುವಿನ ಅಬುಜ್ಮಾಡ್ ಅರಣ್ಯ ಪ್ರದೇಶದಲ್ಲಿ ಬೆಳಗ್ಗೆ 8 ಗಂಟೆ ಸುಮಾರಿಗೆ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಸ್ಥಳೀಯ ಪೊಲೀಸರು ಜೊತೆ ಭದ್ರತಾ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದರು. ಘಟನೆಯಲ್ಲಿ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿಗೆ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಅವರು ಹೇಳಿದರು.
ಸಮವಸ್ತ್ರ ಧರಿಸಿದ್ದ ಮೂವರು ಮಹಿಳೆಯರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ಥಳದಿಂದ ದೊಡ್ಡ ಪ್ರಮಾಣದಲ್ಲಿ ಬಂದೂಕುಗಳು, ಸಿಡಿ ಮದ್ದುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನು ಹೆಚ್ಚಿನ ನಕ್ಸಲರು ಇಲ್ಲಿ ನೆಲೆಸಿರುವ ಬಗ್ಗೆ ಮಾಹಿತಿ ಇದ್ದು ಶೋಧ ಕಾರ್ಯಾಚರಣೆ ಮುಂದುವರೆಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.