ಛತ್ತೀಸ್​ಗಢದಲ್ಲಿ ಎನ್​ಕೌಂಟರ್: ಭದ್ರತಾ ಪಡೆಯ ಗುಂಡಿಗೆ ಇಬ್ಬರು ನಕ್ಸಲರ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಛತ್ತೀಸ್​ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ.

ಎನ್​ಕೌಂಟರ್​ ಸ್ಥಳದಿಂದ ನಕ್ಸಲರೇ ಹತರಾದವರ ಶವಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿಂತಲ್ನಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಚಿಂತವಾಗು ನದಿಯ ಸಮೀಪವಿರುವ ಅರಣ್ಯದ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಸ್ಥಳೀಯ ಪೊಲೀಸರು ಕಾರ್ಯಾಚರಣೆ ನಡೆಸಿ ಈ ಎನ್​ಕೌಂಟರ್ ನಡೆಸಿದರು ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ಹೇಳಿದ್ದಾರೆ.

ಇಬ್ಬರು ನಕ್ಸಲೀಯರನ್ನು ಗುಂಡಿಕ್ಕಿ ಕೊಲ್ಲಲಾಯಿತು, ಆದರೆ ಅವರ ಸಹೋದ್ಯೋಗಿಗಳು ಗುಂಡಿನ ಚಕಮಕಿಯ ಸಮಯದಲ್ಲಿ ಮೃತ ದೇಹಗಳನ್ನು ಕಾಡಿಗೆ ಎಳೆದುಕೊಂಡು ಹೋಗುವಲ್ಲಿ ಯಶಸ್ವಿಯಾದರು ಎಂದು ಚವಾಣ್ ಹೇಳಿದರು.

ಘಟನಾ ಸ್ಥಳದಿಂದ ಮಾವೋವಾದಿಗಳಿಗೆ ಸಂಬಂಧಿಸಿದ ವಸ್ತುಗಳ ಬೃಹತ್ ಸಂಗ್ರಹವನ್ನು ವಶಪಡಿಸಿಕೊಳ್ಳಲಾಗಿದೆ.

ಸೋಮವಾರ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಎನ್​ಕೌಂಟನ್​ನಲ್ಲಿ ಇಬ್ಬರು ಪುರುಷರು ಮತ್ತು ಓರ್ವ ಮಹಿಳೆ ಸೇರಿದಂತೆ ಮೂವರು ನಕ್ಸಲರು ಸಾವನ್ನಪ್ಪಿದ್ದರು.

- Advertisement - Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!