ಹೊಸದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲೀಯರು ಹತರಾಗಿದ್ದಾರೆ.
ಉಸೂರು-ಬಸಗುಡ-ಪಾಮೆಡ್ ಗ್ರಾಮಗಳ ಟ್ರೈ-ಜಂಕ್ಷನ್‌ನಲ್ಲಿರುವ ಕಾಡಿನಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಸಿಬ್ಬಂದಿಯ ಜಂಟಿ ತಂಡ, ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದೆ ಎಂದು ಬಸ್ತಾರ್ ರೇಂಜ್‌ನ ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ಪಿ. ಅವರು ತಿಳಿಸಿದ್ದಾರೆ.
ರಾಜ್ಯ ಪೊಲೀಸ್‌ನ ಜಿಲ್ಲಾ ಮೀಸಲು ಗಾರ್ಡ್(ಡಿಆರ್‌ಜಿ) ಮತ್ತು ಕೋಬ್ರಾ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಗುಂಡಿನ ಚಕಮಕಿ ನಿಲ್ಲಿಸಿದ ನಂತರ, ಇಬ್ಬರು ನಕ್ಸಲರ ಮೃತ ದೇಹಗಳನ್ನು ಮತ್ತು ಸ್ವಯಂ-ಲೋಡಿಂಗ್ ರೈಫಲ್(ಎಸ್‌ಎಲ್‌ಆರ್), ಬ್ಯಾರೆಲ್ ಗ್ರೆನೇಡ್ ಲಾಂಚರ್ ಶೆಲ್‌ಗಳು, ಸ್ಥಳೀಯವಾಗಿ ತಯಾರಿಸಿದ ಶಸ್ತ್ರಾಸ್ತ್ರಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.