ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಗಂಡೇಬಲ್ ಜಿಲ್ಲೆಯಲ್ಲಿ ಆಪರೇಷನ್ ಅರಹಮಾ ಕಾರ್ಯಾಚರಣೆ ನಡೆಯುತ್ತಿದೆ. ರಾತ್ರಿಯಡೀ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಪಾಕಿಸ್ತಾನ ಮೂಲದ ಉಗ್ರನ ಹತ್ಯೆ ಮಾಡಲಾಗಿದೆ.
ಗಂಡೇಬಲ್ ಜಿಲ್ಲೆಯ ಅರಹಮಾ ಪ್ರದೇಶದಲ್ಲಿ ʻಆಪರೇಷನ್ ಅರಹಮಾʼ ಕಾರ್ಯಾಚರಣೆ ಮುಂದುವರಿದಿದ್ದು. ಭದ್ರತಾ ಪಡೆಗಳು ಶೋಧ ನಡೆಸುತ್ತಿವೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ ಜೊತೆಗೆ ಭಾರತೀಯ ಸೇನೆಯ ಎರಡು ಅಸ್ಸಾಂ ರೆಜಿಮೆಂಟ್‌ಗಳು ಜಂಟಿ ಕಾರ್ಯಾಚರಣೆ ನಡೆಸುತ್ತಿವೆ.



