ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಅರ್ವಾನಿ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಓರ್ವ ಅಪರಿಚಿತ ಉಗ್ರ ಮೃತಪಟ್ಟಿದ್ದಾನೆ. ಇಂದು ನಸುಕಿನ ಜಾವ ಭದ್ರತಾ ಪಡೆ ಯೋಧರು ಮತ್ತು ಉಗ್ರರ ನಡುವೆ ಎನ್ಕೌಂಟರ್ ನಡೆದಿದೆ. ಈ ಎನ್ಕೌಂಟರ್ನಲ್ಲಿ ಒಬ್ಬ ಉಗ್ರನ ಹತ್ಯೆ ಮಾಡಲಾಗಿದ್ದು, ಶೋಧಕಾರ್ಯ ಇನ್ನೂ ಮುಂದುವರಿದಿದೆ.
ಇಂದು ಬೆಳಗ್ಗೆ ಉಗ್ರರ ಚಲನವಲನಗಳ ಬಗ್ಗೆ ನಿಖರ ಮಾಹಿತಿ ಪಡೆದ ಭಧ್ರತಾ ಪಡೆಗಳು, ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.