ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಉತ್ತರ ಕಾಶ್ಮೀರ ಜಿಲ್ಲೆಯ ಲೋಲಾಬ್‌ನ ಮಾರ್ಗಿ ಪ್ರದೇಶದಲ್ಲಿ ಭಯೋತ್ಪಾದಕರ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಬುಧವಾರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದವು. ನಂತರ ಶೋಧ ಕಾರ್ಯಾಚರಣೆ ಎನ್‌ಕೌಂಟರ್ ಗೆ ತಿರುಗಿತು ಎಂದು ಅವರು ಹೇಳಿದ್ದಾರೆ.
ಎನ್‌ಕೌಂಟರ್ ನಡೆದ ಸ್ಥಳದಿಂದ ಎಕೆ ರೈಫಲ್, ಎರಡು ಹ್ಯಾಂಡ್ ಗ್ರೆನೇಡ್‌ಗಳು ಮತ್ತು ನಾಲ್ಕು ಎಕೆ ರೈಫಲ್ ಮ್ಯಾಗಜೀನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.