Friday, October 7, 2022

Latest Posts

ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್‌ನಲ್ಲಿ ಯೋಧರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಜಮ್ಮು ಮತ್ತು ಕಾಶ್ಮೀರ ಪೊಲೀಸರುಭದ್ರತಾ ಪಡೆಗಳ ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು, ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ.
ಇಲ್ಲಿನ ವಾಟರ್​ಹೈಲ್​ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಅಡಗಿ ಕುಳಿತಿದ್ದ ಭಯೋತ್ಪಾದಕರು ಗುಂಡಿನ ದಾಳಿಗೆ ಮುಂದಾಗಿದ್ದಾರೆ. ಪ್ರತಿದಾಳಿ ನಡೆಸಿದ ಭದ್ರತಾ ಪಡೆಗಳು ಇಬ್ಬರನ್ನು ಸದೆಬಡಿಯುವಲ್ಲಿ ಯಶಸ್ವಿಯಾದರು. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!