ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬನನ್ನು ಹೊಡೆದುರುಳಿಸಲಾಗಿದೆ.
ಕೆತ್ಸುನ್ ಅರಣ್ಯದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆ ಪ್ರದೇಶದಲ್ಲಿ ಇನ್ನೂ ಕಾರ್ಯಾಚರಣೆ ನಡೆಯುತ್ತಿದೆ. ಎನ್‌ಕೌಂಟರ್ ಮುಗಿದ ಬಳಿಕ ಹತ್ಯೆಗೀಡಾದ ಉಗ್ರನ ಗುರುತು ಪತ್ತೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನವೆಂಬರ್ 2 ರಂದು ಖನ್ಯಾರ್ ಪ್ರದೇಶದಲ್ಲಿ ಒಂದು ದಿನ ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನದ ಉಸ್ಮಾನ್ ಭಾಯಿ ಅಲಿಯಾಸ್ ಚೋಟಾ ವಲೀದ್ ಎಂದು ಗುರುತಿಸಲಾದ ಎಲ್ಇಟಿಯ ಉನ್ನತ ಕಮಾಂಡರ್ ನನ್ನು ಹತ್ಯೆಗೈಯಲಾಗಿತ್ತು. ಖನ್ಯಾರ್ ಎನ್ ಕೌಂಟರ್ ನಲ್ಲಿ ಇಬ್ಬರು ಸ್ಥಳೀಯ ಪೊಲೀಸರು ಮತ್ತು ಇಬ್ಬರು ಸಿಆರ್‌ಪಿಎಫ್ ಯೋಧರು ಗಾಯಗೊಂಡಿದ್ದರು.