Monday, October 2, 2023

Latest Posts

ಜಮ್ಮು -ಕಾಶ್ಮೀರದಲ್ಲಿ ಎನ್‌ಕೌಂಟರ್‌: ಉಗ್ರನ ಹತ್ಯೆ, ಪೊಲೀಸರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಜಮ್ಮು ಮತ್ತು ಕಾಶ್ಮೀರ ರಿಯಾಸಿ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಓರ್ವ ಪೊಲೀಸ್ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತುಲಿ ಪ್ರದೇಶದ ಗಾಲಿ ಸೊಹಾಬ್ ಗ್ರಾಮದಲ್ಲಿ ಇಬ್ಬರು ಭಯೋತ್ಪಾದಕರು ಇರುವ ಬಗ್ಗೆ ಪೊಲೀಸರಿಗೆ ನಿರ್ದಿಷ್ಟ ಮಾಹಿತಿ ಬಂದ ನಂತರ ಮಧ್ಯಾಹ್ನ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಜಮ್ಮು ವಲಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಅವರು ಹೇಳಿದ್ದಾರೆ.

ಇಲ್ಲಿಯವರೆಗೆ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಇನ್ನೊಬ್ಬನನ್ನು ತಟಸ್ಥಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಎಡಿಜಿಪಿ ತಿಳಿಸಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್ ಸಹ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!