ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ (Jammu and Kashmir) ರಾಜೌರಿ (Rajouri) ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ (Encounter) ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಜಮ್ಮುವಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಮುಖೇಶ್ ಸಿಂಗ್ , ಬುಧಾಲ್ ಪ್ರದೇಶದ ಗುಂಧಾ-ಖಾವಾಸ್ ಗ್ರಾಮದಲ್ಲಿ ಉಗ್ರರ ಉಪಸ್ಥಿತಿಯ ಬಗ್ಗೆ ಮಾಹಿತಿ ನೀಡಿದ ನಂತರ ಪೊಲೀಸರು ಮತ್ತು ಸೇನೆ ಶೋಧ ಕಾರ್ಯಾಚರಣೆ ನಡೆಸಿದ್ದು , ಈ ಸಮಯದಲ್ಲಿ ಎನ್‌ಕೌಂಟರ್ ನಡೆಸಲಾಯಿತು ಎಂದು ತಿಳಿಸಿದ್ದಾರೆ.
ಇದುವರೆಗೆ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಸೇನಾ ಸಿಬ್ಬಂದಿ ಹತರಾಗಿದ್ದಾರೆ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹಾಲನ್ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ದೊರೆತ ನಂತರ ಭದ್ರತಾ ಪಡೆಗಳು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದ್ದವು.