ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಎನ್‌ಕೌಂಟರ್‌: ಐವರು ನಕ್ಸಲರು ಹತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಪೊಲೀಸರು ಸೋಮವಾರ ನಡೆಸಿರುವ ಎನ್‌ಕೌಂಟರ್‌ನಲ್ಲಿ ಆರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಲಾಲ್ಪಾನಿಯಾ ಪ್ರದೇಶದ ಲುಗು ಬೆಟ್ಟ ಪ್ರದೇಶದಲ್ಲಿ ಇಂದು ಬೆಳಿಗ್ಗೆ 5.30 ರ ಸುಮಾರಿಗೆ ಗುಂಡಿನ ಚಕಮಕಿ ಆರಂಭವಾಗಿದ್ದು, ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

209 ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆ್ಯಕ್ಷನ್ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಆರು ನಕ್ಸಲರು ಸಾವನ್ನಪ್ಪಿದ್ದು, ಎರಡು ಐಎನ್‌ಎಸ್‌ಎಎಸ್ ರೈಫಲ್‌ಗಳು, ಒಂದು ಸೆಲ್ಫ್ ಲೋಡಿಂಗ್ ರೈಫಲ್ ಮತ್ತು ಒಂದು ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆ ವೇಳೆ ಯಾವುದೇ ಯಾವುದೇ ಭದ್ರತಾ ಸಿಬ್ಬಂದಿಯೂ ಗಾಯಗೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ. .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!