ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು -ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆದಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಕುಲ್ಗಾಮ್ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದು ಮೃತದೇಹಗಳನ್ನು, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳೊಂದಿಗೆ ವಶಪಡಿಸಿಕೊಳ್ಳಲಾಗಿದೆ. ಸದ್ಯ ಕಾರ್ಯಾಚರಣೆ ನಡೆಯುತ್ತಿದೆ. ಜಿಲ್ಲೆಯ ಅಡಿಗಾಂ ಗ್ರಾಮದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಗುಪ್ತಚರ ಮಾಹಿತಿ ಲಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರ ನಂತರ, ಸೇನೆ, ಪೊಲೀಸ್ ಮತ್ತು ಸಿಆರ್‌ಪಿಎಫ್ ಸೇರಿದಂತೆ ಭದ್ರತಾ ಪಡೆಗಳು ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಸಿದ್ದವು.