ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ.
ಜಮ್ಮು ಪ್ರದೇಶದ ಗುಡ್ಡಗಾಡು ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿ ಉಗ್ರರು ಅಡಗಿರುವ ಶಂಕೆಯ ಮೇರೆಗೆ ತೀವ್ರ ನಿಗಾ ಇಡಲು ಭದ್ರತಾ ಪಡೆಗಳು, ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶಕ್ಕೆ ಕಣ್ಗಾವಲು ವ್ಯಾಪ್ತಿಯನ್ನು ವಿಸ್ತರಿಸಿವೆ.
ಜಿಲ್ಲೆಯ ಚತ್ರು ಅರಣ್ಯ ಪ್ರದೇಶದಲ್ಲಿ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಪ್ರಾರಂಭಿಸಿದ ಶೋಧ ಮತ್ತು ಹತ್ಯೆ ಕಾರ್ಯಾಚರಣೆ ಸಮಯದಲ್ಲಿ ಕಿಶ್ತ್ವಾರ್‌ನಲ್ಲಿ ಎನ್‌ಕೌಂಟರ್ ನಡೆದಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರತಿಕೂಲ ಭೂಪ್ರದೇಶ ಮತ್ತು ಪ್ರತಿಕೂಲ ಹವಾಮಾನದ ಹೊರತಾಗಿಯೂ, ನಮ್ಮ ಧೈರ್ಯಶಾಲಿ ಸೈನಿಕರು ನಿರಂತರವಾಗಿ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ ಎಂದು ಸೇನೆ ಹೇಳಿದೆ.