ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಕಾಶ್ಮೀರದ ಕುಲ್ಗಾಮ್‌ನಲ್ಲಿ ಎನ್‌ಕೌಂಟರ್ ನಡೆದಿದ್ದು, ಭಾರತೀಯ ಸೇನೆ ಲಷ್ಕರ್ ಎ ತೊಯ್ಬಾದ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ.
ಸಾಮ್ನು ಪ್ರದೇಶದಲ್ಲಿ ಎನ್‌ಕೌಂಟರ್ ಆರಂಭವಾಗಿದ್ದು, ಇನ್ನೂ ಕಾರ್ಯಾಚರಣೆ ನಡೆಯುತ್ತಿದೆ. ಇದೀಗ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ನಡೆಯುತ್ತಿದ್ದು, ಉಗ್ರರಿಗಾಗಿ ಶೋಧ ನಡೆಯುತ್ತಿದೆ.
ನಿನ್ನೆ ಸಂಜೆಯಿಂದಲೇ ಕಾರ್ಯಾಚರಣೆ ಆರಂಭವಾಗಿದ್ದು, ಕತ್ತಲಿನಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿ ಬೆಳಗ್ಗೆ ಮತ್ತೆ ಕಾರ್ಯಾಚರಣೆ ಆರಂಭಿಸಲಾಗಿದೆ.
ಸೇನೆಯ 34 ರಾಷ್ಟ್ರೀಯ ರೈಫಲ್ಸ್, ಎಲೈಟ್ ಸ್ಪೆಷಲ್ ಫೋರ್ಸ್ ಯುನಿಟ್, ಪೊಲೀಸ್ ಹಾಗೂ ಸಿಆರ್‌ಪಿಎಫ್ ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.