Monday, July 4, 2022

Latest Posts

ಕುಲ್ಗಾಂನಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಭದ್ರತಾ ಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಓಕೈ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ಭದ್ರತಾ ಪಡೆಗಳು ಹಾಗೂ ಪೊಲೀಸರು ಜಂಟಿಯಾಗಿ ಶೋಧ ನಡೆಸಿದ್ದು, ಅಡಗಿದ್ದ ಉಗ್ರರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಉಗ್ರರಿಗೆ ಶರಣಾಗುವಂತೆ ಕೇಳಿದ್ದಾರೆ, ಶರಣಾಗಲು ನಿರಾಕರಿಸಿದ ಉಗ್ರರನ್ನು ಸದೆಬಡೆಯಲಾಗಿದೆ.

ಹತರಾದ ಇಬ್ಬರು ಉಗ್ರರು ಲಷ್ಕರ್-ಎ-ತೊಯ್ಬಾ ಅಥವಾ ಟಿಆರ್‌ಎಫ್‌ನೊಂದಿಗೆ ನಂಟು ಹೊಂದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss