ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಹತರಾಗಿದ್ದಾರೆ.
ಮಧ್ಯಾಹ್ನದ ವೇಳೆಗೆ ಭಾರೀ ಗುಂಡಿನ ಚಕಮಕಿ ಆರಂಭವಾಗಿ ಸುಮಾರು 6 ಗಂಟೆಗೂ ಹೆಚ್ಚು ಕಾಲ ಸಂಜೆಯವರೆಗೂ ನಿರಂತರ ಗುಂಡಿನ ಚಕಮಕಿ ನಡೆಯಿತು.
ಕಾರ್ಯಾಚರಣೆ ವೇಳೆ 3 AK47, 2 INSAS, 1 ಕಾರ್ಬೈನ್ ಮತ್ತು 1 SLR, 7 ವಾಹನ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಳಗ್ಗೆ 10 ಗಂಟೆ ಸುಮಾರಿಗೆ ಗಡ್‌ಚಿರೋಲಿಯಿಂದ ಕಾರ್ಯಾಚರಣೆ ನಡೆಸಲಾಗಿದ್ದು, ಗ್ರಾಮದ ಬಳಿ 12-15 ನಕ್ಸಲರು ಕ್ಯಾಂಪ್ ಹಾಕಿರುವ ಬಗ್ಗೆ ಮಾಹಿತಿ ಬಂದಿದ್ದರಿಂದ ಛತ್ತೀಸ್‌ಗಢದ ಗಡಿಯ ವಂಡೋಲಿ ಗ್ರಾಮದ ಬಳಿ 7 ಸಿ60 ತಂಡಗಳನ್ನು ಡಿವೈಎಸ್ಪಿಗಳ ನೇತೃತ್ವದಲ್ಲಿ ಕಳುಹಿಸಲಾಗಿತ್ತು.
ಮಹಾರಾಷ್ಟ್ರ ಗೃಹ ಸಚಿವ ದೇವೇಂದ್ರ ಫಡ್ನವೀಸ್ ಅವರು ಸಿ60 ಕಮಾಂಡೋ ತಂಡಗಳು ಮತ್ತು ಗಡ್ಚಿರೋಲಿ ಪೊಲೀಸರಿಗೆ 51 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮತ್ತಷ್ಟು ನಕ್ಸಲೀಯರು ಅಡಗಿರುವ ಮಾಹಿತಿಯಿದ್ದು, ಶೋಧ ಕಾರ್ಯ ಮುಂದುವರೆಸಲಾಗಿದೆ.
ಘಟನೆಯಲ್ಲಿ ಸಿ-60 ಕಮಾಂಡೋ ಸಬ್ ಇನ್ಸ್ ಪೆಕ್ಟರ್ ಹಾಗೂ ಓರ್ವ ಯೋಧರು ಸೇರಿದ್ದು, ಅವರು ಪ್ರಾಣಪಾಯದಿಂದ ಪಾರಾಗಿದ್ದು, ಅವರನ್ನು ನಾಗ್ಪುರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಎಸ್ಪಿ ವಿವರ ನೀಡಿದರು.