Wednesday, September 17, 2025

ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಎನ್‌ಕೌಂಟರ್‌: ಇಬ್ಬರು ಮಹಿಳಾ ನಕ್ಸಲರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಹಿಳಾ ನಕ್ಸಲರು ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರದ ಎಟಪಲ್ಲಿ ತಾಲೂಕಿನ ಮೋಡಸ್ಕೆ ಗ್ರಾಮದ ಪಕ್ಕದಲ್ಲಿರುವ ಕಾಡಿನಲ್ಲಿ ಬುಧವಾರ ಎನ್‌ಕೌಂಟರ್ ನಡೆದಿದೆ.

ಅಧಿಕಾರಿಗಳ ಮಾಹಿತಿ ಪ್ರಕಾರ, ಮೋಡಸ್ಕೆ ಗ್ರಾಮದ ಪಕ್ಕದಲ್ಲಿರುವ ಕಾಡಿನಲ್ಲಿ ಮಾವೋವಾದಿಗಳ ಗಟ್ಟಾ ಲಾಸ್ ಎಂಬ ಸ್ಥಳೀಯ ಸಂಘಟನಾ ತಂಡದ ಕೆಲವು ಸದಸ್ಯರು ಬೀಡುಬಿಟ್ಟಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು. ಮಾಹಿತಿ ಆಧಾರದ ಮೇಲೆ ಗಡ್ಚಿರೋಲಿ ಪೊಲೀಸರ ವಿಶೇಷ ನಕ್ಸಲ್ ವಿರೋಧಿ ಕಮಾಂಡೋ ಸ್ಕ್ವಾಡ್, C-60ಯ ಐದು ಘಟಕಗಳೊಂದಿಗೆ ಪೊಲೀಸರು ಅಹೇರಿ ಗ್ರಾಮದಿಂದ ಕಾರ್ಯಾಚರಣೆ ಪ್ರಾರಂಭಿಸಿದರು. ಜೊತೆಗೆ ಸಿಆರ್‌ಪಿಎಫ್ ಈ ಕಾರ್ಯಾಚರಣೆಗೆ ಸಹಾಯ ಮಾಡಿತು. ಈ ವೇಳೆ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ತಿಳಿಸಿದ್ದಾರೆ.

ಶೋಧ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳಾ ನಕ್ಸಲರ ಶವ ಪತ್ತೆಯಾಗಿದೆ. ಜೊತೆಗೆ ಸ್ವಯಂಚಾಲಿತ ಎಕೆ-47 ರೈಫಲ್, ಪಿಸ್ತೂಲ್, ಜೀವಂತ ಮದ್ದುಗುಂಡುಗಳು ಸೇರಿದಂತೆ ಕೆಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ