Wednesday, August 17, 2022

Latest Posts

ಶೋಪಿಯಾನ್ ಜಿಲ್ಲೆಯಲ್ಲಿ ಎನ್‌ಕೌಂಟರ್: ಲಷ್ಕರ್ ಸಂಘಟನೆಯ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ರಾವಲ್ಪೋರಾ ಪ್ರದೇಶದಲ್ಲಿಮತ್ತೆ ಎನ್‌ಕೌಂಟರ್ ಪ್ರಾರಂಭಗೊಂಡಿದ್ದು, ಒಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ.
ಹತ್ಯೆಗೀಡಾದ ಭಯೋತ್ಪಾದಕನನ್ನು ಲಷ್ಕರ್-ಎ-ತೊಯಿಬಾ ಸಂಘಟನೆ ಜೊತೆ ಸಂಪರ್ಕ ಹೊಂದಿರುವ ಶೋಪಿಯಾನ್‌ನ ರಾಖ್ ನರಪೊರಾ ನಿವಾಸಿ ಜಹಾಂಗೀರ್ ಅಹ್ಮದ್ ವಾನಿ ಎಂದು ಗುರುತಿಸಲಾಗಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶೋಪಿಯಾನ್ ಪೊಲೀಸರ ಪ್ರಕಾರ, ಪೊಲೀಸರು ಶನಿವಾರ ರಾತ್ರಿ ಜಂಟಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಈ ಪ್ರದೇಶದಲ್ಲಿ 34 ರಾಷ್ಟ್ರೀಯ ರೈಫಲ್ಸ್ ಮತ್ತು ಸಿಆರ್​ಪಿಎಫ್​ 14 ಬೆಟಾಲಿಯನ್ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಸಾವನ್ನಪ್ಪಿದ ಭಯೋತ್ಪಾದಕ ಕಳೆದ ವರ್ಷ ಸೆಪ್ಟೆಂಬರ್‌ನಿಂದ ಉಗ್ರ ಚಟುವಟಿಕೆಯಲ್ಲಿ ಸಕ್ರಿಯನಾಗಿದ್ದನು ಮತ್ತು ಭದ್ರತಾ ಪಡೆಗಳ ಮೇಲಿನ ದಾಳಿ, ನಾಗರಿಕ ದೌರ್ಜನ್ಯ ಸೇರಿದಂತೆ ಹಲವಾರು ಭಯೋತ್ಪಾದಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದನು. ಈತನಿಂದ ಯುಎಸ್ಎ ನಿರ್ಮಿತ ಎಂ 4 ಕಾರ್ಬೈನ್ ರೈಫಲ್ ಸೇರಿದಂತೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!