ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರರ ಹತನಾಗಿದ್ದಾನೆ. ಇನ್ನೂ ಇಬ್ಬರು ಉಗ್ರರನ್ನು ವಶಕ್ಕೆ ಪಡೆಯಲಾಗಿದೆ.
ಪೊಲೀಸ್, ಸೇನೆ ಮತ್ತು ಸಿಆರ್‌ಪಿಎಫ್‌ನ ಜಂಟಿ ತಂಡವು ಅರಣ್ಯ ಪ್ರದೇಶದಲ್ಲಿ ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ವರದಿಗಳು ತಿಳಿಸಿವೆ.
ಪಡೆಗಳ ಜಂಟಿ ತಂಡವು ಶಂಕಿತ ಸ್ಥಳದ ಕಡೆಗೆ ಸಮೀಪಿಸುತ್ತಿದ್ದಂತೆ, ಅಡಗಿಕೊಂಡಿದ್ದ ಉಗ್ರಗಾಮಿಗಳು ಪಡೆಗಳ ಮೇಲೆ ಗುಂಡು ಹಾರಿಸಿದರು, ಗುಂಡಿನ ಚಕಮಕಿ ನಡೆಯಿತು.