ಶೋಪಿಯಾನ್‌ನಲ್ಲಿ ಎನ್‌ಕೌಂಟರ್: ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕನ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಎನ್‌ಕೌಂಟರ್ ನಡೆಸಿದ್ದು, ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.

ಉಮರ್ ಇಶ್ಫಾಕ್ ಮಲಿಕ್ ಅಲಿಯಾಸ್ ಮೂಸಾ ಮೃತ ಭಯೋತ್ಪಾದಕನಾಗಿದ್ದಾನೆ. ಶೋಪಿಯಾನ್‌ನ ನಾಡಿಗಂ ಗ್ರಾಮದಲ್ಲಿ ಭಯೋತ್ಪಾದಕರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು, ಸೇನೆ ಮತ್ತು ಸಿಆರ್‌ಪಿಎಫ್ ಜಂಟಿ ಕಾರ್ಯಾಚರಣೆ ಆರಂಭಿಸಿದ್ದಾರೆ.

ಕಾರ್ಯಾಚರಣೆ ವೇಳೆ ಪೊಲೀಸರು ಸ್ಥಳಕ್ಕೆ ಬಂದ ತಕ್ಷಣ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ಪ್ರತಿದಾಳಿ ಮಾಡಿದ್ದು, ಒಬ್ಬ ಉಗ್ರನನ್ನು ಹೊಡೆದುರುಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!