ಅಪ್ರಾಪ್ತ ವಯಸ್ಕ ಬಾಲಕಿ ಅತ್ಯಾಚಾರದ ಆರೋಪಿ ಎನ್‌ಕೌಂಟರ್‌: ರಾಜ್ಯ ಸರ್ಕಾರಕ್ಕೆ ಎನ್‌ಎಚ್‌ಆರ್‌ಸಿ ನೋಟಿಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹುಬ್ಬಳ್ಳಿಯಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ ಮತ್ತು ಕೊಲೆ ನಂತರ ಪೊಲೀಸ್ ಎನ್‌ಕೌಂಟರ್‌ನಲ್ಲಿ ಆರೋಪಿ ಸಾವು ಘಟನೆ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರಾಜ್ಯ ಸರ್ಕಾರ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದೆ.

ಈ ಸಂಬಂಧ ಮಾಧ್ಯಮಗಳ ಮಾಧ್ಯಮಗಳ ವರದಿ ಆಧಾರದ ಮೇಲೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿರುವ ಆಯೋಗ ಬುಧವಾರ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ. ಆಯೋಗವು ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯದ ಪೊಲೀಸ್ ಮುಖ್ಯಸ್ಥರಿಂದ ನಾಲ್ಕು ವಾರಗಳಲ್ಲಿ ವಿವರವಾದ ವರದಿಯನ್ನು ಕೇಳಿದೆ.

ಸಂತ್ರಸ್ತೆ ಮತ್ತು ಆರೋಪಿಯ ಮರಣೋತ್ತರ ಪರೀಕ್ಷೆ ವರದಿ ಹಾಗೂ ಮ್ಯಾಜಿಸ್ಟೀರಿಯಲ್ ತನಿಖಾ ವರದಿ ಸೇರಿದಂತೆ ಒಟ್ಟಾರೇ ವರದಿಯನ್ನು ನಾಲ್ಕು ವಾರಗಳ ಒಳಗಾಗಿ ನೀಡುವಂತೆ ತಿಳಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!