ಮಹಾರಾಷ್ಟ್ರ- ಛತ್ತೀಸ್‌ಗಢ ಗಡಿಯಲ್ಲಿ ಎನ್‌ಕೌಂಟರ್‌: ಇಬ್ಬರು ನಕ್ಸಲರ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢದ ಗಡಿಭಾಗದ ಕಾಡಿನಲ್ಲಿ ನಡೆಸಿದ ಇಂದು ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮಹಿಳೆ ಸೇರಿದಂತೆ ಇಬ್ಬರು ನಕ್ಸಲರು ಹತರಾಗಿದ್ದಾರೆ.
ಉಳಿದವರುತಪ್ಪಿಸಿಕೊಂಡಿದ್ದು , ಹೆಚ್ಚಿನ ಸಾವು ನೋವು ಸಂಭವಿಸಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ಮಹಾರಾಷ್ಟ್ರದ ಗಡ್‌ಚಿರೋಲಿ ಪೊಲೀಸ್‌ ಸಿ-60 ಘಟಕದ ಅಧಿಕಾರಿಗಳು ಮತ್ತು ಛತ್ತೀಸ್‌ಗಢದ ಬಿಜಾಪುರ ಪೊಲೀಸ್‌ನ ಡಿಆರ್‌ಜಿ ದಮ್ರಾಂಚ ಅರಣ್ಯ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಸಮಯದಲ್ಲಿ ನಕ್ಸಲರು ಗುಂಡಿನ ದಾಳಿ ನಡೆಸಿದ್ದು, . ಪ್ರತಿಯಾಗಿ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದಾರೆ.
ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಇಬ್ಬರು ನಕ್ಸಲೀಯರ ಮೃತದೇಹಗಳು ಪತ್ತೆಯಾಗಿದ್ದು, ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಗಡ್‌ಚಿರೋಲಿಯ ಪೊಲೀಸ್ ವರಿಷ್ಠಾಧಿಕಾರಿ ನೀಲೋತ್ಪಾಲ್ ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!