ಪಾಕಿಸ್ತಾನದ ಗಡಿಯಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರನ್ನು ಸದೆಬಡಿದ ಭದ್ರತಾ ಪಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪಾಕಿಸ್ತಾನದ ಗಡಿ ನಿಯಂತ್ರಣ ರೇಖೆಯ ಬಳಿ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಎನ್​ಕೌಂಟರ್​ನಲ್ಲಿ ಸದೆಬಡಿದು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕುಪ್ವಾರ ಜಿಲ್ಲೆಯ ಮಚಿಲ್ ಸಮೀಪದ ಟೆಕ್ರಿ ನಾರ್​ನಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿ ಇಬ್ಬರು ಭಯೋತ್ಪಾದಕರನ್ನು ಎನ್‌ಕೌಂಟರ್‌ ಮಾಡಿವೆ. ಹತ ಉಗ್ರರ ಬಳಿಯಿದ್ದ ಎರಡು ಎಕೆ 47 ರೈಫಲ್‌ಗಳು, ಎರಡು ಪಿಸ್ತೂಲ್‌ಗಳು ಮತ್ತು ನಾಲ್ಕು ಹ್ಯಾಂಡ್ ಗ್ರೆನೇಡ್‌ಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!