ಜಮ್ಮು ಕಾಶ್ಮೀರ: ಎನ್‌ ಕೌಂಟರ್‌ನಲ್ಲಿ ಇಬ್ಬರು ಲಷ್ಕರ್ ಉಗ್ರರ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಸಿರ್ಹಾಮಾ ಹಾಗೂ ಕುಲ್ಗಾಂ ಹಳ್ಳಿಗಳಲ್ಲಿ ಕಾರ್ಯಾಚರಣೆ ನಡೆಸಿರುವ ಭದ್ರತಾಪಡೆಗಳು ಇಬ್ಬರು ಎಲ್‌ಇಟಿ ಉಗ್ರರನ್ನು ಎನ್‌ ಕೌಂಟರ್‌ ನಲ್ಲಿ ಹತ್ಯೆ ಮಾಡಿವೆ.
ಸಿರ್ಹಾಮಾ ಹಳ್ಳಿಯಲ್ಲಿ ಉಗ್ರರು ಅವಿತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಜಮ್ಮು ಕಾಶ್ಮೀರ​ ಪೊಲೀಸರು, ಭದ್ರತಾ ಪಡೆಯು ಈ ಸ್ಥಳವನ್ನು ಸುತ್ತುವರೆದು ಕಾರ್ಯಾಚರಣೆ ನಡೆಸಿದ್ದಾರೆ. ಅಪಾಯದ ಮುನ್ಸೂಚನೆ ಸಿಗುತ್ತಿದ್ದಂತೆ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆಯೇ ಗುಂಡಿನ ದಾಳಿ ನಡೆಸಿದ್ದಾರೆ. ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಿದ ಸೇನಾಪಡೆಗಳು ಓರ್ವ ಎಲ್ಇಟಿ ಉಗ್ರನನ್ನು ಹೊಡೆದುರುಳಿಸಿವೆ. ನಿಸಾರ್ ದಾರ್ ಹತ್ಯೆಯಾದ ಉಗ್ರ ಎಂಬ ಮಾಹಿತಿ ಲಭ್ಯವಾಗಿದೆ.
ಕುಲ್ಗಾಮ್ ಜಿಲ್ಲೆಯಲ್ಲಿಯೂ ಭದ್ರತಾ ಪಡೆಗಳು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕನನ್ನು ಎನ್‌ ಕೌಂಟರ್‌ ನಲ್ಲಿ ಹತ್ಯೆ ಮಾಡಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಚಾಕಿಸಮದ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದ್ದು, ಸ್ಥಳದಲ್ಲಿ ಅವಿತಿರುವ ಉಗ್ರರಿಗಾಗಿ ಶೋಧ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅನಂತ್​ನಾಗ್ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!