ಕುಲ್ಗಾಮ್‌ನಲ್ಲಿ ಗುಂಡಿನ ದಾಳಿ, ಇಬ್ಬರು ಭಯೋತ್ಪಾದಕರು ಹತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕುಲ್ಗಾಮ್‌ನ ಚೆಯಾನ್ ದೇವ್‌ಸರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ದಾಳಿ ನಡೆದಿದೆ. ದಾಳಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಸೇನೆ ಹೊಡೆದುರುಳಿಸಿದೆ. ಅವರ ಬಳಿಯಿದ್ದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಸೇರಿದಂತೆ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸಾವನ್ನಪ್ಪಿದ ಇಬ್ಬರಲ್ಲಿ ಓರ್ವ ಪಾಕಿಸ್ತಾನಿ ಭಯೋತ್ಪಾದಕ ಹೈದರ್ ಬಂಡಿಪೋರಾದಲ್ಲಿ ಇತ್ತೀಚೆಗೆ ನಡೆದ 2 ಭಯೋತ್ಪಾದಕ ಅಪರಾಧಗಳಲ್ಲಿ ಭಾಗಿಯಾಗಿದ್ದು 6 ಸಾವುಗಳಿಗೆ ಕಾರಣವಾಗಿದ್ದಾನೆ. CT,  SGCT, SPO ಮತ್ತು ಮೂವರು ಪೊಲೀಸರು ಸೇರಿದಂತೆ, ನಾಗರಿಕ ಹತ್ಯೆ ಹಾಗೂ ಸ್ಥಳೀಯ ಭಯೋತ್ಪಾದಕ ಕೃತ್ಯಗಳಲ್ಲಿ ಶಹಬಾಜ್ ಷಾ ಭಾಗಿಯಾಗಿದ್ದಾನೆ ಎಂದು ಕಾಶ್ಮೀರ ಐಜಿಪಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!