ಪೊಲೀಸ್- ನಕ್ಸಲ್ ನಡುವೆ ಮುಖಾಮುಖಿ: ಎನ್‌ಕೌಂಟರ್ ನಲ್ಲಿ ನಾಲ್ವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರು ಹತರಾಗಿದ್ದಾರೆ.

ಮಹಾರಾಷ್ಟ್ರದ ಗಡ್ಜಿರೋಲಿಯಲ್ಲಿ ಪೊಲೀಸರು ಹಾಗೂ ನಕ್ಸಲರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದ್ದು,ನಾಲ್ವರು ನಕ್ಸಲರನ್ನು ಪೊಲೀಸರು ಹೊಡೆದುರುಳಿಸಿದ್ದಾರೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅನಾಹುತ ಸೃಷ್ಟಿಸಲು ಸಂಚು ರೂಪಿಸಿದ್ದ ನಕ್ಸಲರು ಅರಣ್ಯಗಳಲ್ಲಿ ಅಡಗಿ ಕುಳಿತಿದ್ದರು. ಮಹಾರಾಷ್ಟ್ರ ಪೊಲೀಸರ ವಿಶೇಷ ಸಿ-60 ಕಮಾಂಡೋಗಳು ಹಾಗೂ ಸಿಆರ್‌ಪಿಎಫ್ ಕಮಾಂಡೋಗಳು ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.

ನಕ್ಸಲರನ್ನು ಹಿಡಿದುಕೊಟ್ಟವರಿಗೆ 36 ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಲಾಗಿತ್ತು. ಇದೀಗ ನಕ್ಷಲರು ಬಲಿಯಾಗಿದ್ದು, ಗುರುತನ್ನು ಪೊಲೀಸರು ಬಹಿರಂಗಪಡಿಸಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!