ಪಾಕಿಸ್ತಾನ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌: 8 ಭಯೋತ್ಪಾದಕರ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಗುಪ್ತಚರ ಮಾಹಿತಿ ಆಧರಿಸಿ, ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಎಂಟು ಭಯೋತ್ಪಾದಕರು ಹತ್ಯೆಯಾಗಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.

ಖೈಬರ್ ಪಖ್ತುಂಖ್ವಾದ ದಕ್ಷಿಣ ವಜಿರಿಸ್ತಾನ್ ಜಿಲ್ಲೆಯಲ್ಲಿ ಸೈನಿಕರು ಮತ್ತು ಭಯೋತ್ಪಾದಕರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ. ಸರೋಘಾ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪಾಕ್‌ ಭದ್ರತಾ ಪಡೆ ಈ ಪ್ರದೇಶವನ್ನು ಸುತ್ತುವರೆದು ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಎಂಟು ಭಯೋತ್ಪಾದಕರು ಹತ್ಯೆಯಾಗಿರುವುದಾಗಿ ಸೇನೆಯ ಮಾಧ್ಯಮ ವಿಭಾಗ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ ತಿಳಿಸಿದೆ.

ಘಟನೆ ನಡೆದ ಸ್ಥಳದಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ದೇಶದಿಂದ ಭಯೋತ್ಪಾದನೆಯ ಬೆದರಿಕೆಯನ್ನು ನಿರ್ಮೂಲನೆ ಮಾಡುವ ಭಾಗವಾಗಿ, ಭಯೋತ್ಪಾದಕರನ್ನು ಮಟ್ಟ ಹಾಕುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪಾಕಿಸ್ತಾನ ಸೇನೆ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!