ಸಿರಿಧಾನ್ಯ ಬಳಕೆಗೆ ಉತ್ತೇಜನ: ಸರ್ಕಾರದ ಎಲ್ಲಾ ಸಭೆ, ಸಮಾರಂಭಗಳಲ್ಲಿ ಸಿರಿಧಾನ್ಯ ಆಧಾರಿತ ತಿಂಡಿ ತಿನಿಸು, ಪಾನೀಯಗಳ ಬಳಕೆಗೆ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಸಿರಿಧಾನ್ಯ ಬಳಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರದ ಎಲ್ಲಾ ಸಭೆ, ಸಮಾರಂಭಗಳಲ್ಲಿ ಸಿರಿಧಾನ್ಯ ಆಧಾರಿತ ತಿಂಡಿ ತಿನಿಸು, ಪಾನೀಯಗಳನ್ನು ಬಳಸುವಂತೆ ಆದೇಶ ಹೊರಡಿಸಿದೆ.

ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷ 2023ನ್ನು ಅರ್ಥಪೂರ್ಣವಾಗಿ ಆಚರಿಸುವ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ಕಾರ್ಯದರ್ಶಿ ಶಿವಯೋಗಿ ಕಳಸದ ಅವರು, ಸುತ್ತೋಲೆಯನ್ನು ಹೊರಡಿಸಿದ್ದಾರೆ.

ರಾಜ್ಯದ ಎಲ್ಲಾ ಇಲಾಖೆಗಳು ಹಾಗೂ ಎಲ್ಲಾ ಅಧೀನ ಕಚೇರಿಗಳಲ್ಲಿ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್​​ ರಾಜ್ ಇಲಾಖಾ ವತಿಯಿಂದ ಎಲ್ಲಾ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತ್ಗಳಲ್ಲಿ ಆಯೋಜಿಸಲಾಗುವ ಎಲ್ಲಾ ಸಭೆ, ಸಮಾರಂಭಗಳಲ್ಲಿ ಸಿರಿಧಾನ್ಯ ಆಧಾರಿತ ತಿಂಡಿ ತಿನಿಸು/ಪಾನೀಯಗಳನ್ನು ಬಳಸುವಂತೆ ಸೂಚನೆ ನೀಡಲಾಗಿದೆ.

ವಿವಿಧ ಯೋಜನೆಗಳಡಿಯಲ್ಲಿ ಸಿರಿಧಾನ್ಯಗಳ ಉತ್ಪಾದನೆ ಮತ್ತು ಬಳಕೆಯನ್ನು ಉತ್ತೇಜಿಸುವ ಸಲುವಾಗಿ ಹಾಗೂ ಸಿರಿಧಾನ್ಯಗಳಿಗೆ ದೇಶೀಯ ಮತ್ತು ಜಾಗತಿಕ ಬೇಡಿಕೆಯನ್ನು ಸೃಷ್ಟಿಸಲು ಮತ್ತು ಜನರಿಗೆ ಪೌಷ್ಟಿಕಾಂಶದ ಆಹಾರವನ್ನು ಒದಗಿಸಲು ಅಂತಾರಾಷ್ಟ್ರೀಯ ಸಿರಿಧಾನ್ಯಗಳು ವರ್ಷ ಎಂದು ಘೋಷಿಸಲು ವಿಶ್ವಸಂಸ್ಥೆಗೆ ಭಾರತ ಸರ್ಕಾರ 2021ರಲ್ಲಿ ಪುಸ್ತಾಪಿಸಿದ ಮೇರೆಗೆ ವಿಶ್ವಸಂಸ್ಥೆ ‘2023ನೇ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ’ ಎಂದು ಘೋಷಿಸಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಹಯೋಗದಿಂದ ಸಿರಿಧಾನ್ಯಗಳ ಉತ್ಪಾದನೆ ಮತ್ತು ಬಳಕೆಗೆ ಹಲವಾರು ಕಾರ್ಯಕ್ರಮಗಳನ್ನು ಕೃಷಿ ಇಲಾಖೆ ರೂಪಿಸುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!