Monday, November 24, 2025

ಭಾರತೀಯ ಚಿತ್ರರಂಗದ ಒಂದು ಯುಗದ ಅಂತ್ಯ: ಧರ್ಮೇಂದ್ರ ನಿಧನಕ್ಕೆ ಪ್ರಧಾನಿ ಮೋದಿ ಕಂಬನಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್‍ನ ದಂತಕತೆ ನಟ ಧರ್ಮೇಂದ್ರ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸಲ್ಲಿಸಿದರು. ಧರ್ಮೇಂದ್ರ ಅವರ ನಿಧನವು ಭಾರತೀಯ ಚಿತ್ರರಂಗದ ಒಂದು ಯುಗದ ಅಂತ್ಯ ಎಂದು ಬರೆದಿದ್ದಾರೆ.

ಧರ್ಮೇಂದ್ರ ಅವರ ನಿಧನವು ಭಾರತೀಯ ಚಿತ್ರರಂಗದಲ್ಲಿ ಒಂದು ಯುಗದ ಅಂತ್ಯವನ್ನು ಸೂಚಿಸುತ್ತದೆ. ಅವರು ಒಬ್ಬ ಅಪ್ರತಿಮ ಚಲನಚಿತ್ರ ವ್ಯಕ್ತಿತ್ವ, ಅವರು ನಿರ್ವಹಿಸಿದ ಪ್ರತಿಯೊಂದು ಪಾತ್ರಕ್ಕೂ ಜೀವ ತುಂಬಿರುವ ಅದ್ಭುತ ನಟ. ಅವರು ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸಿದ ರೀತಿ ಅಸಂಖ್ಯಾತ ಜನರನ್ನು ಆಕರ್ಷಿಸಿತು. ಧರ್ಮೇಂದ್ರ ಅವರ ಸರಳತೆ, ವಿನಯತೆಗೆ ಮೆಚ್ಚುಗೆ ಪಡೆದಿದ್ದಾರೆ. ಈ ದುಃಖದ ಸಮಯದಲ್ಲಿ, ನನ್ನ ಮನಸ್ಸು ಅವರ ಕುಟುಂಬ, ಸ್ನೇಹಿತರು ಮತ್ತು ಅಸಂಖ್ಯಾತ ಅಭಿಮಾನಿಗಳೊಂದಿಗೆ ಇವೆ. ಓಂ ಶಾಂತಿ ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಬರೆದಿದ್ದಾರೆ.

ಸಿಎಂ ಸಿದ್ದರಾಮಯ್ಯ ಕೂಡ ಧರ್ಮೇಂದ್ರ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ದಿಗ್ಗಜ ನಟ ಧರ್ಮೇಂದ್ರ ಅವರ ನಿಧನದಿಂದ ನಾನು ಆಳವಾದ ದುಃಖ ಅನುಭವಿಸುತ್ತಿದ್ದೇನೆ. ಅವರು ಭಾರತೀಯ ಚಿತ್ರರಂಗದ ಅತ್ಯಂತ ಪ್ರೀತಿಸಲ್ಪಟ್ಟ ಐಕಾನಿಕ್ ವ್ಯಕ್ತಿತ್ವಗಳಲ್ಲಿ ಒಬ್ಬರು. ಅವರ ಮರೆಯಲಾಗದ ಅಭಿನಯ ಮತ್ತು ದಶಕಗಳ ಕಾಲ ಸಿನಿಮಾ ಸಂಸ್ಕೃತಿಗೆ ನೀಡಿದ ಕೊಡುಗೆ ಅನೇಕ ತಲೆಮಾರುಗಳ ಮೇಲೆ ಅಚ್ಚಳಿಯದ ಛಾಪು ಬಿತ್ತಿವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಪರಂಪರೆ ಮುಂದಿನ ತಲೆಮಾರುಗಳನ್ನು ಪ್ರೇರೇಪಿಸುತ್ತಿರಲಿ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಧರ್ಮೇಂದ್ರ ಅವರು ಜನಿಸಿದ್ದು ಡಿಸೆಂಬರ್‌ 8, 1935ರಂದು. 15 ದಿನ ಕಳೆದಿದ್ದರೆ, ಅವರ 90ನೇ ಹುಟ್ಟುಹಬ್ಬವನ್ನು ತುಂಬಾ ಅದ್ಧೂರಿಯಾಗಿ ಮಾಡುವುದಕ್ಕೆ ಇಡೀ ಡಿಯೋಲ್‌ ಫ್ಯಾಮಿಲಿ ಕಾತರದಿಂದ ಕಾದಿತ್ತು. ಧರ್ಮೇಂದ್ರ ಅವರ ಎರಡನೇ ಪತ್ನಿ ಹೇಮಾ ಮಾಲಿನಿ ಅವರು ಧರ್ಮೇಂದ್ರ ಅವರ 90ನೇ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಮಾಡುವುದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದರು ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಹುಟ್ಟುಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಧರ್ಮೇಂದ್ರ ಉಸಿರು ಚೆಲ್ಲಿದ್ದಾರೆ.

error: Content is protected !!