Tuesday, September 23, 2025

ಬಿಬಿಎಂಪಿ ಯುಗಾಂತ್ಯ! ಬೀದಿನಾಯಿಗಳ ಬಿರಿಯಾನಿ ಭ್ಯಾಗ್ಯಕ್ಕೆ ಬರೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 5 ಪಾಲಿಕೆಗಳಾಗಿ ವಿಭಜನೆಯಗೊಂಡು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆಗಿ ಪರಿವರ್ತನೆಗೊಂಡಿದ್ದು, ಇದರ ಬೆನ್ನಲ್ಲೇ ಬಿಬಿಎಂಪಿ ಕೈಗೆತ್ತಿಕೊಂಡಿದ್ದ ನಾಯಿಗಳಿಗೆ ಆಹಾರ ನೀಡುವ ಯೋಜನೆ ಕೂಡ ಸ್ಥಗಿತಗೊಂಡಂತಾಗಿದೆ.

ಬೀದಿ ನಾಯಿಗಳಿಗೆ ಪ್ರತಿ ದಿನ ಪೌಷ್ಟಿಕ ಆಹಾರ ನೀಡಲು ರೂ.2.88 ಕೋಟಿ ವೆಚ್ಚದ ಯೋಜನೆಯೊಂದನ್ನು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ರೂಪಿಸಿತ್ತು.

ನಾಯಿಗಳಿಗೆ ಆಹಾರ ನೀಡುವ ಕಡತವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅವರಿಗೆ ಸಲ್ಲಿಸಲಾಗಿದ್ದು, ಯೋಜನೆ ಬಗ್ಗೆ ಐದು ನಿಗಮಗಳು ನಿರ್ಧಾರ ಕೈಗೊಳ್ಳಬೇಕಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಕೋವಿಡ್-19 ಸಾಂಕ್ರಾಮಿಕ ರೋಗ ಸಮಯದಲ್ಲಿ ಬಿಬಿಎಂಪಿ ಬೀದಿ ನಾಯಿಗಳಿಗೆ ಆಹಾರವನ್ನು ನೀಡಲು ಪ್ರಾರಂಭಿಸಿತು. ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ ಸೂಚಿಸಿದ 2023 ರ ಪ್ರಾಣಿ ಜನನ ನಿಯಂತ್ರಣ ನಿಯಮಗಳ ಪ್ರಕಾರ, ಶಾಸನಬದ್ಧ ಅವಶ್ಯಕತೆಯಂತೆ, ಬಿಬಿಎಂಪಿ ಜುಲೈನಲ್ಲಿ ಬೀದಿ ನಾಯಿಗಳಿಗೆ ಆಹಾರವನ್ನು ನೀಡಲು ಒಂದು ಯೋಜನೆಯನ್ನು ರೂಪಿಸಿತು.

ಇದನ್ನೂ ಓದಿ