ಅಮಿತ್​ ಶಾ ಜೊತೆಗಿನ ಗಡಿ ವಿವಾದದ ಸಭೆ ಅಂತ್ಯ: ಸಿಎಂ ಬೊಮ್ಮಾಯಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಕುರಿತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಜೊತೆಗಿನ ಸಭೆಯ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಕುರಿತು ವಿವರಿಸಿದ್ದೇನೆ. ಜನರ ನಡುವೆ ಏನು ಸಮಸ್ಯೆ ಇಲ್ಲ ಈ ಬಗ್ಗೆ ಯಾರು ಪ್ರಚೋದನಕಾರಿ ಹೇಳಿಕೆ ನೀಡಬಾರದು. ಸುಪ್ರೀಂಕೋರ್ಟ್ ಆದೇಶ ನೀಡಲಿದೆ. ಸಣ್ಣ ಪುಟ್ಟ ವಿಚಾರಗಳ ಸಮಸ್ಯೆಗಳಿದ್ದರೆ ತಟಸ್ಥ ಸಮಿತಿಯಲ್ಲಿ ಚರ್ಚಿಸಿ ಸರಿ ಮಾಡಿಕೊಳ್ಳಲು ಅಮಿತ್​ ಶಾ ಸೂಚಿಸಿದ್ದಾರೆ ಎಂದು ಬೊಮ್ಮಾಯಿ ಹೇಳಿದ್ದಾರೆ.

2004 ರಿಂದ ಏನೇಲ್ಲ ಆಯ್ತು ಎಂದು ಹೇಳಿದ್ದೇನೆ. ಮಹಾರಾಷ್ಟ್ರದವರು ತಮ್ಮ ವಾದ ಮುಂದಿಟ್ಟರು. ಎರಡು ವಾದವನ್ನು ಕೇಳಿದ ಬಳಿಕ ಕೆಲವು ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಿದರು.

ಜನವರಿಯಲ್ಲಿ ಕೋರ್ಟ್​​ನಲ್ಲಿ ವಿಚಾರಣೆಗೆ ಬರಲಿದೆ. ನಾನು ಗಡಿಯಲ್ಲಿ ವಾಸ್ತವ ಸ್ಥಿತಿಗತಿ ಹೇಳಿದ್ದೇನೆ. ಗಡಿಯಲ್ಲಿನ ಗಲಭೆ, ಪ್ರತಿಭಟನೆಗಳ ಬಗ್ಗೆ ನಿಗಾ ವಹಿಸಲು ಆಯಾ ರಾಜ್ಯದಲ್ಲಿ ಓರ್ವ ಐಪಿಎಸ್ ನೇಮಿಸಲು ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!