ಸಿಎಂ-ಶಾ ಭೇಟಿ ಅಂತ್ಯ: ಬರಿಗೈಯಲ್ಲಿ ರಾಜ್ಯಕ್ಕೆ ಬಂದ ಬಸವರಾಜ ಬೊಮ್ಮಾಯಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದಲ್ಲಿ ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಕುರಿತು ಮಾತುಕರೇ ನಡೆಸಲು ದೆಹಲಿ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆಯಲ್ಲಿ ತಕ್ಷಣದ ಯಾವುದೇ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ಮತ್ತೆ ಬರಿಗೈಯಲ್ಲಿ ವಾಪಸಾಗಬೇಕಾಗಿದೆ.
ಮುಖ್ಯಮಂತ್ರಿ ಬೊಮ್ಮಾಯಿ ಅವರು ಇಂದುದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ ಜೋಶಿ ಸಮ್ಮುಖದಲ್ಲಿ ಸಂಪುಟ ವಿಸ್ತರಣೆ ಕುರಿತು ಮಹತ್ವದ ಮಾತುಕತೆ ನಡೆಸಿದರು. ಎಲ್ಲವನ್ನು ಆಲಿಸಿದ ಅಮಿತ್ ಶಾ ನೀವು ರಾಜ್ಯಕ್ಕೆ ವಾಪಸ್​ ತೆರಳಿ, ನಾವು ಈ ಬಗ್ಗೆ ಚರ್ಚಿಸಿ ನಿರ್ಧಾರ ತಿಳಿಸುತ್ತೇವೆ ಎಂದಿದ್ದಾರೆ. ಹೀಗಾಗಿ ಮತ್ತೊಮ್ಮೆ ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ.

ಅಮಿತ್ ಶಾ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ರಾಜಕೀಯ ವಿದ್ಯಮಾನಗಳು, ಸ್ಥಿತಿಗತಿಗಳು ಮತ್ತು ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ ನಡೆಸಲಾಗಿದೆ .

ನಿನ್ನೆ ಸುಪ್ರೀಂಕೋರ್ಟ್ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ನೀಡಿರುವ ಆದೇಶ, ಅದರ ಪರಿಣಾಮಗಳೇನು? ಯಾವ ನಿರ್ಧಾರ ತೆಗೆದುಕೊಳ್ಳಬೇಕು ಎನ್ನುವುದು ಸೇರಿದಂತೆ ಎಲ್ಲವೂ ಕೂಡ ಚರ್ಚೆಯಾಗಿದೆ. ನಾವು ಎಲ್ಲವನ್ನೂ ಅವರಿಗೆ ತಿಳಿಸಿದ್ದು, ಸುದೀರ್ಘವಾಗಿ ಕೇಳಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಜೊತೆ ಮಾತನಾಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ. 2-3 ದಿನಗಳ ಬೆಳವಣಿಗೆ ಆಧಾರದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು, ರಾಜಕೀಯ ಪಕ್ಷವಾಗಿ ಎಲ್ಲಾ ತೀರ್ಮಾನ ಮಾಡಬೇಕಾಗಿದೆ. ಒಟ್ಟಾರೆ ರಾಜಕೀಯ ಸ್ಥಿತಿಗತಿಗಳ ಆಧಾರದ ಮೇಲೆ ನಿರ್ಣಯಗಳು ಆಗಲಿವೆ. ಈ ಹಿನ್ನೆಲೆಯಲ್ಲಿ ಇಂದು ಸ್ಥಿತಿಗತಿ ಏನಿದೆ ಎನ್ನುವುದನ್ನು ವಿವರಿಸಿದ್ದೇನೆ. ಮುಂದಿನ ಒಂದು ವಾರ ಬಹಳ ಮುಖ್ಯವಾಗಿದೆ. ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ದೊಡ್ಡಪ್ರಮಾಣದಲ್ಲಿ ಇಡೀ ರಾಜ್ಯದ ತುಂಬಾ ಚುನಾವಣೆ ನಡೆಯುವುದರಿಂದ ಅದರ ಪರಿಣಾಮ ಏನು ಎನ್ನುವುದರ ಕುರಿತು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!